ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಅವಳಿ ಸಹೋದರಿಯರು ಗುರು ಹಿರಿಯರು ಹಾಗೂ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದಾರೆ.
ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದು, ಇತ್ತೀಚೆಗಷ್ಟೇ ತಂದೆ ನಿಧನರಾಗಿದ್ದರಿಂದ ತಾಯಿ ಜೊತೆ ವಾಸವಾಗಿದ್ದರು.
ತಾಯಿಗೂ ಅನಾರೋಗ್ಯ ಕಾಡುತ್ತಿದ್ದು, ಮುಂದೆ ಒಬ್ಬರು ಮದುವೆ ಆದರೆ ಮತ್ತೊಬ್ಬಾಕೆಗೆ ಆಗಲಿಲ್ಲ ಅಂದರೆ ಹೇಗೆ ಬಿಟ್ಟು ಇರುವುದು ಎಂದು ಸಹೋದರಿಯರು ಅತುಲ್ ಎಂಬಾತನನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಅತುಲ್ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಯುವತಿಯರ ತಾಯಿಗೆ ಅನಾರೋಗ್ಯ ಕಾಡಲು ಆರಂಭಿಸಿದಾಗ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy