ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ಹುಡುಗಿಯರ ಬಗ್ಗೆ ಅಶ್ಲೀಲವಾದ ಬರಹಗಳನ್ನು ಬರೆದಿರುವ ಬಗ್ಗೆ ಶನಿವಾರ ಪೊಲೀಸರು ತಿಳಿಸಿದ್ದಾರೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಪ್ರಾಥಮಿಕ ಶಾಲೆಯ ಗೋಡೆಗಳ ಮೇಲೆ ಅವಾಚ್ಯ ಶಬ್ದಗಳು ಬರೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಗಂಗಾವತಿ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ಅವರು ತಿಳಿಸಿದ್ದಾರೆ.
ಕೃತ್ಯದಲ್ಲಿ ಇಬ್ಬರು ಬಾಲಕರು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಸುಮಾರು 15 ಬಾಲಕರನ್ನು ಈ ಬಗ್ಗೆ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಶಾಲಾ ಆವರಣದಲ್ಲಿ ಸಿಸಿ ಟಿವಿ ಅಳವಡಿಸಲು ನಿರ್ದೇಶನ ಮಾಡಲಾಗಿದೆ. ಇನ್ನೂ ಘಟನೆಯಲ್ಲಿ ಹೊರಗಿನವರ ಕೈವಾಡವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ.
ಈ ಘಟನೆ ಇದು ಮೊದಲಲ್ಲ ಹಿಂದೆಯೂ ನಡೆದಿದೆ. ವಿಶೇಷವಾಗಿ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


