ಬೆಂಗಳೂರು : ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ.
ಈಗ ಅಕ್ಟೋಬರ್ ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು, ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ.
ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಕಲ್ಲಿದ್ದಲಿನ ದರ ಏರಿಕೆಯಾದರೇ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇ ಆರ್ ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ, ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy