ತುಮಕೂರು: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಟಿಡಿಸಿಸಿಐ) ಹಾಗೂ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಪ್ರಾದೇಶಿಕ ಕಚೇರಿ ತುಮಕೂರು ವತಿಯಿಂದ ಪ್ರಧಾನಮಂತ್ರಿ ವಿಕಾಸಿತ ಭಾರತ ರೋಜ್ಗಾರ್ ಯೋಜನೆ ಬಗ್ಗೆ ಅಕ್ಟೋಬರ್ 15ರಂದು ಬೆಳಗ್ಗೆ 11:30 –12:30ವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ವಂಶಿ ಕೃಷ್ಣ ದಿಂಡಿ, ಪ್ರಾದೇಶಿಕ ಪಿ.ಎಫ್. ಆಯುಕ್ತರು ಪ್ರಾದೇಶಿಕ ಕಛೇರಿ, ತುಮಕೂರು ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. TDCCI ಕಟ್ಟಡ, ಎಪಿಎಂಸಿ ಯಾರ್ಡ್, ಬಟವಾಡಿ, ತುಮಕೂರು ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ತುಮಕೂರು ಜಿಲ್ಲೆಯ ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ವಿವಿಧ ಅಸೋಸಿಯೇಷನ್ ಗಳ ಅಧ್ಯಕ್ಷರು/ ಕಾರ್ಯದರ್ಶಿಗಳು /ಕಾರ್ಯಕಾರಿ ಮಂಡಳಿ ಸದಸ್ಯರು, ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗ, ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು/ ಸಿಬ್ಬಂದಿ ವರ್ಗ, ವಿವಿಧ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ತುಮಕೂರಿನ ಜನಸಾಮಾನ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC