ಔರಾದ: ಕಂದಗುಳ ಬುದ್ಧ ವಿಹಾರದಲ್ಲಿ ಅಕ್ಟೋಬರ್ 2ರಂದು ಧಮ್ಮಚಕ್ರ ಪ್ರವರ್ತನ ದಿನಾಚರಣೆ ಭವ್ಯವಾಗಿ ಜರುಗಲಿದೆ ಎಂದು ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ತಿಳಿಸಿದ್ದಾರೆ.
ಕಾರ್ಯಕ್ರಮ ಸಂಬಂಧ ಮಾಹಿತಿ ನೀಡಿದ ಅವರು, ಬೆಳಿಗ್ಗೆ 11ಕ್ಕೆ ಬುದ್ಧ ಪೂಜೆ–ಪ್ರಾರ್ಥನೆಯಿಂದ ಕಾರ್ಯಕ್ರಮ ಆರಂಭವಾಗಿ, ಮಧ್ಯಾಹ್ನ 1ಕ್ಕೆ ಭೀಮಗೀತೆ ಹಾಗೂ ಭಜನೆಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಮಾರಂಭವನ್ನು ಸಿದ್ದಾರ್ಥ್ ಸೋಶಿಯಲ್ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC