ಮಧುಗರಿ: ತಾಲೂಕು ಕುಂಚಿಟಿಗರ ಸಂಘದ ವತಿಯಿಂದ ಕುಂಚಿಟಿಗರ ಸಂಘದ ನೂತನ ಭವನದ ಉದ್ಘಾಟನೆ ಮತ್ತು ದಾನಿಗಳಿಗೆ ಸನ್ಮಾನ ಸಮಾರಂಭ ಇದೇ ತಿಂಗಳು ಅಕ್ಟೋಬರ್ 31 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷರಾದ ರಾಜಶೇಖರ್ ಉಪಾಧ್ಯಕ್ಷರಾದ ಜಗದೀಶ್ ಕಾರ್ಯದರ್ಶಿ ಉಮೇಶ್ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಎಲೆ ರಾಂಪುರದ ಕುಂಚಿಟಿಗ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ವಹಿಸಲಿದ್ದು ಅಧ್ಯಕ್ಷತೆಯನ್ನು ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷ ಪಿ.ಎನ್.ರಾಜಶೇಖರ್ ವಹಿಸಲಿದ್ದಾರೆ.
ನೂತನ ಭವನದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಎಂ.ವಿ.ವೀರಭದ್ರಯ್ಯ, ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಸುರೇಶ್ ಗೌಡ, ಅತಿಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಕಾವೇರಿ ನಿಗಮದ ಕೆ.ಜಯಪ್ರಕಾಶ್, ವಿಶೇಷ ಆಹ್ವಾನಿತರಾಗಿ ನಿವೃತ್ತ ಚುನಾವಣಾ ಆಯುಕ್ತ ಸಿ.ಚಿಕ್ಕಣ್ಣ, ಮುಖ್ಯ ಅತಿಥಿಗಳಾಗಿ ಪುರಸಭಾ ಅಧ್ಯಕ್ಷರಾದ ಲಾಲಪೇಟೆ ಮಂಜುನಾಥ್ ಕೌಶಲ್ಯ ಅಭಿವೃದ್ಧಿಗೆ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ, ತುಮಕೂರು ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ ಬಾಬು, ಚೇತನ ವಿದ್ಯಾ ಸಂಸ್ಥೆ ಕಾರ್ಯದರ್ಶಿ ತುಂಗೋಟಿ ರಾಮಣ್ಣ, ಸಂಘದ ಗೌರವಾಧ್ಯಕ್ಷ ಡಿ.ಎಸ್.ಸಿದ್ದಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC