ಗದಗ: ಅಕ್ರಮವಾಗಿ ಸಂಗ್ರಹಿಸಿದ್ದ ಅನ್ನಭಾಗ್ಯ ಅಕ್ಕಿ ದಾಸ್ತಾನು ಗೋಡೌನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಹೊರ ವಲಯದ ಗೋಡೌನ್ನಲ್ಲಿ ಅಪಾರ ಪ್ರಮಾಣದ ಅಕ್ಕಿಯನ್ನು ಶೇಖರಿಸಿಡಲಾಗಿತ್ತು. ಈ ಕುರಿತು ಸಾರ್ವಜನಿಕರ ಮಾಹಿತಿ ಮೇರೆಗೆ ಇಂದು ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದರು.


