ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಕಾರ್ಯಕ್ರಮಗಳು ಸೇರಿದಂತೆ ದಸರಾ ಕೃಷಿ ಉತ್ಸವದ ಉದ್ಘಾಟನೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.
ಮೈಸೂರು ಅಪರ ಜಿಲ್ಲಾಧಿಕಾರಿ ಶ್ರೀರೂಪ ಅವರು ವಿಧಾನ ಸೌಧದಲ್ಲಿರುವ ಸಮಿತಿ ಕೊಠಡಿಯಲ್ಲಿ ಮೈಸೂರು ಜಿಲ್ಲಾಡಳಿತದ ಪರವಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ, ಸನ್ಮಾನಿಸಿ, ಆಹ್ವಾನ ಪತ್ರವನ್ನು ನೀಡುವ ಮೂಲಕ ಅಧಿಕೃತ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


