ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಔರಾದ್ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಸಂಘದ ಪದಾಧಿಕಾರಿಗಳು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ಆಗಸ್ಟ್ 29ರಂದು (2026) ಬೆಳಿಗ್ಗೆ 11:00 ಗಂಟೆಗೆ ನಡೆಯಲಿರುವ ಈ ವಿಶೇಷ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕರನ್ನು ಭೇಟಿ ಮಾಡಿದ ನಿಯೋಗವು ಆಹ್ವಾನ ಪತ್ರಿಕೆ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಶಿವಾನಂದ ಮೊಕ್ತೆದಾರ್, ಪ್ರಧಾನ ಕಾರ್ಯದರ್ಶಿ ಅನೀಲಕುಮಾರ ದೇಶಮುಖ, ಮುಖಂಡರಾದ ಮಲ್ಲಪ್ಪ ಗೌಡ, ಚನ್ನಬಸವ ಮೊಕ್ತೆದಾರ್, ರತಿಕಾಂತ ಸೇರಿದಂತೆ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
