ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ.
ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸುವುದಾಗಿ ಶಾಲಾ ಶಿಕ್ಷಣ ಸಚಿವ ಸಚಿವ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ರಾಜ್ಯಾದ್ಯಂತ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು-495 ಶಾಲೆಗಳಿವೆ. ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


