ರಾಯಚೂರು: ಅನಧಿಕೃತವಾಗಿ ನಡೆಸುತ್ತಿದ್ದ ಕೋಚಿಂಗ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸೂಗೂರು ಎಸಿ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿದ್ದಾರೆ.
ಅನಧಿಕೃತವಾಗಿ ನಡೆಸುತ್ತಿರುವ ಎಲ್ಲಾ ಕೋಚಿಂಗ್ ಸೆಂಟರ್ ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಕೇಂದ್ರಗಳನ್ನು ಬಂದ್ ಮಾಡಿ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ.
ಅನಧಿಕೃತ ಕೋಚಿಂಗ್ ಸೆಂಟರ್ ಗಳು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರ ಒಳಗೆ ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡುವಂತೆ ಸೂಚಿಸಿದೆ. ಈ ಕ್ರಮಗಳನ್ನು ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ನಡೆಸಲು ಮುಂದಾಗಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296