ತಿಪಟೂರು ತಾಲೂಕು ಕಾಂಗ್ರೆಸ್ ನಲ್ಲಿ ಲೋಕೇಶ್ವರ್ ಬಣ, ಷಡಕ್ಷರಿ ಬಣ ಎಂಬುವುದು ಇಲ್ಲ, ಪಕ್ಷದ ಹೈಕಮಾಂಡ್ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಲೋಕೇಶ್ ಅವರು ಪಕ್ಷದ ನಿಯಮಕ್ಕೆ ಬದ್ಧರಾಗಿ ಗೆಲುವಿಗೆ ಹೆಗಲು ಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲೋಕೇಶ್ವರ್ ಹಾಗೂ ಕೆ.ಷಡಕ್ಷರಿ ಅವರು ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.
ಕ್ಷೇತ್ರದ ಸಮಸ್ಯೆಗಳನ್ನು ಮುಂದಿಟ್ಟು ಮತಯಾಚಿಸುತ್ತೇವೆ, ಜೊತೆಯಾಗಿ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕೆ.ಷಡಕ್ಷರಿ ಹೇಳಿದರು.
ಲೋಕೇಶ್ ಅವರು ಮಾತನಾಡಿ, ತಡವಾಗಿಯಾದರೂ ಒಳ್ಳೆ ನಿರ್ಧಾರ ಕೈಗೊಳ್ಳಲಾಗಿದೆ. ಸಣ್ಣ ಸಣ್ಣ ನದಿ ಸಮುದ್ರ ಸೇರಿದ ನಂತರ, ನೀರೆಲ್ಲ ಒಂದಾದಂತೆ, ನಾವು ಒಂದಾಗಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy