nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಮಿಕರ ಪ್ರಾಣದ ಜೊತೆಗೆ ಆಯಿಲ್ ಮಿಲ್ ಮಾಲಿಕರ ಚೆಲ್ಲಾಟ
    ಜಿಲ್ಲಾ ಸುದ್ದಿ June 21, 2022

    ಕಾರ್ಮಿಕರ ಪ್ರಾಣದ ಜೊತೆಗೆ ಆಯಿಲ್ ಮಿಲ್ ಮಾಲಿಕರ ಚೆಲ್ಲಾಟ

    By adminJune 21, 2022No Comments2 Mins Read
    oil mill

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿನ ಸಂತೇಪೇಟೆಯಲ್ಲಿರುವ ವಿನಾಯಕ ರೋಟರಿ ಆಯಿಲ್ ಮಿಲ್ ಮೂವತ್ತು ನಲವತ್ತು ವರ್ಷಗಳಿಂದ ನಡೆಸುತ್ತಿದ್ದರೂ, ಯಾವುದೇ ಪರವಾನಿಗೆ ಪಡೆಯದೇ ನಡೆಸಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಜೊತೆಗೆ ಇಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸುರಕ್ಷತೆಗೆ ಯಾವುದೇ ಕ್ರಮಕೈಗೊಳ್ಳಲಾಗುತ್ತಿಲ್ಲ. ಇದರಿಂದಾಗಿ ಕಾರ್ಮಿಕರು ಅಪಾಯಕ್ಕೆ ಸಿಲುಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಕೆಲ ದಿನಗಳ ಹಿಂದೆ ಇದೇ ಆಯಿಲ್ ಮಿಲ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಬರುತ್ತಿದ್ದ ಲಕ್ಷ್ಮಕ್ಕ ನವರು ಕೆಲಸ ಮಾಡಿಕೊಂಡು ಬರುತ್ತಿದ್ದ ಮಹಿಳೆಯು ಆಯಿಲ್ ಮಿಲ್ ನ ಮಿಷನ್ ನ ಯಂತ್ರಕ್ಕೆ ಲಕ್ಷ್ಮಕ್ಕ ನವರ ಕೈ ಸಿಕ್ಕಿಕೊಂಡು ಕೈ ತುಂಡಾಗಿದ್ದು, ಘಟನೆಗೆ ಸಂಬಂಧ ಪಟ್ಟಂತೆ ಲಕ್ಷ್ಮಕ್ಕರವರು, ಈ ಅಪಘಾತಕ್ಕೆ ಆಯಿಲ್ ಮಿಲ್ ನ ಮಾಲಿಕನ ನಿರ್ಲಕ್ಷ್ಯತನವೇ ಕಾರಣ ಎಂದು ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ಐ ಪಿ ಸಿ ಸೆಕ್ಸನ್ 287 ಮತ್ತು ಐ ಪಿ ಸಿ ಸೆಕ್ಸನ್ 338 ರಂತೆ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ವಿನಾಯಕ ರೋಟರಿ ಆಯಿಲ್ ಮಿಲ್ ನ ಮಾಲಿಕನ ಮೇಲೆ ಕೇಸ್ ದಾಖಲಾಗಿತ್ತು.

    ವಿನಾಯಕ ರೋಟರಿ ಆಯಿಲ್ ಮಿಲ್ ಮೂವತ್ತು ನಲವತ್ತು ವರ್ಷಗಳಿಂದ ನಡೆಸುತ್ತಿದ್ದರೂ, ಈ ಮಿಲ್ ಗೆ ಇಂದಿಗೂ ಸರ್ಕಾರದಿಂದ ಯಾವುದೇ ಪರವಾನಿಗೆಯ ಮಾನ್ಯತೆ ಆಗಲಿ ಹೊಂದಿರುವುದಿಲ್ಲ ವೆಂಬುದು ಇದೀಗ ಬೆಳಕಿಗೆ ಬಂದಿದೆ . ಯಾವುದೇ ಪರವಾನಿಗೆ ಪಡೆಯದೆ ನಡೆಸುತ್ತಿರುವ ಈ ಮಿಲ್ ನಲ್ಲಿ ದುಡಿಯುತ್ತಿರುವ ಅಮಾಯಕ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದ್ದು, ಮಿಲ್ ನಲ್ಲಿ ನಡೆಯುತ್ತಿರುವ ಅಪಾಯಕಾರಿ ಘಟನೆಗಳಿಂದ ಕೈ ಕಾಲುಗಳನ್ನು ಕಳೆದುಕೊಳ್ಳುವಂತಾಗಿದೆ.
    ಮಿಲ್ ಗೆ ಸಂಬಂಧ ಪಟ್ಟಂತೆ ಸ್ಥಳೀಯ ಆಡಳಿತ ಅಧಿಕಾರಿಗಳು, ನಗರ ಸಭೆ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಯಾವುದೇ ರೀತಿಯ ಕ್ರಮವನ್ನು ವಹಿಸದಿರುವುದು ಅಚ್ಚರಿಗೆ ಕಾರಣವಾಗಿದ್ದು, ಅಧಿಕಾರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದಾರೆಯೇ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ.

    ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಪ್ರತಿನಿಧಿ ವಿನಾಯಕ ರೋಟರಿ ಆಯಿಲ್ ಮಿಲ್ ಗೆ ಭೇಟಿ ನೀಡಿದ ವೇಳೆ ಆಯಿಲ್ ಮಿಲ್ ನಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯನ್ನು ವಿಚಾರಿಸಿದಾಗ , ನಾನು ಇಲ್ಲಿ ಸುಮಾರು ಆರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ನಮಗೆ ಇಲ್ಲಿ ದಿನದ 400 ರೂಪಾಯಿ ಕೂಲಿ ಬಿಟ್ಟರೆ, ಬೇರೆ ಯಾವುದೆ ತರಹದ ಸೌಲಭ್ಯಗಳಿಲ್ಲ. ಕಾರ್ಮಿಕರ ಕಟ್ಟಡ ಇಲಾಖೆಯಲ್ಲಿ ನೋಂದಾಣಿ ಮಾಡಿಸಿಲ್ಲ, ಇಲ್ಲಿ ಕೆಲಸ ಮಾಡುತ್ತಿರುವ ನಮಗೆ ಯಾವುದೇ ಇನ್ಸೂರೆನ್ಸ್ ಪಾಲಿಸಿ ಯಾವುದೇ ತರಹದ ಸೌಲಭ್ಯಗಳು ಸಹ ಇಲ್ಲ ಎಂದು ತಿಳಿಸಿದರು.
    ಲೈಸೆನ್ಸ್ ಇಲ್ಲದೇ ನಡೆಸುತ್ತಿರುವ ಮಿಲ್ ನಲ್ಲಿ ಇನ್ನೇನು ಇರಲು ಸಾಧ್ಯ? ಮಿಲ್ ನಲ್ಲಿ ಕಾರ್ಮಿಕರ ಕೈಕಾಲುಗಳು ಊನಗೊಂಡರೂ ಹೇಳುವವರು ಕೇಳುವವರು ಇಲ್ಲದಂತಾಗಿದೆ. ಮೇಲಾಧಿಕಾರಿಗಳು ಇದನ್ನು ಕಂಡೂ ಕಾಣದಂತಿದ್ದಾರೆ. ಈ ಆಯಿಲ್ ಮಿಲ್ ನಲ್ಲಿ ವಿದ್ಯುತ್ ಪ್ರತಿಯೊಂದು ಸ್ವಿಚ್ ಬೋರ್ಡ್ ಗಳು ಹಳೆಯ ಬೋರ್ಡ್ ಗಳಂತೆ ಕಂಡು ಬಂದಿದ್ದು, ಕಾರ್ಮಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಇನ್ನಾದರೂ ನಿದ್ರಿಸುತ್ತಿರುವಂತೆ ನಟಿಸುತ್ತಿರುವ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

    ವರದಿ: ಮುರುಳಿಧರನ್ ಆರ್ ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಬುಡುಬುಡಿಕೆ ವೇಷದಲ್ಲಿ ಬಂದು ವಂಚಿಸಿ ಬಂಗಾರದ ಒಡವೆಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.…

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.