ನೈಜೀರಿಯಾ: ತೈಲ ಟ್ಯಾಂಕರ್ ಸ್ಫೋಟಗೊಂಡು 18 ಮಂದಿ ಸಾವನ್ನಪ್ಪಿರುವ ಆಫ್ರಿಕನ್ ದೇಶ ನೈಜೀರಿಯಾದಲ್ಲಿ ನಡೆದಿದೆ. ಘಟನೆಯ ಪರಿಣಾಮ 17 ವಾಹನಗಳು ಸುಟ್ಟು ಭಸ್ಮವಾಗಿವೆ.
ಟ್ಯಾಂಕರ್ ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಆಗ್ನೇಯ ರಾಜ್ಯವಾದ ಎನುಗುದಲ್ಲಿನ ಎನುಗು–ಒನಿತ್ಶಾ ಎಕ್ಸ್ ಪ್ರೆಸ್ ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ.
ಘಟನೆಯಲ್ಲಿ 10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4