ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನಗಣತಿ) ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಒಕ್ಕಲಿಗರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.
ರಾಜ್ಯ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಸದಸ್ಯರ ನಿಯೋಗ ಮುಖ್ಯಮಂತ್ರಿಯವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.


