ಸರಗೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಒಳ ಮಿಸಲಾತಿಯನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್.ನಾಗಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು “ಮಾದಿಗ ಜನಾಂಗವೂ ಸುಮಾರು 30 ವರ್ಷಗಳಿಂದ ನ್ಯಾ.ಸದಾಶಿವ ಆಯೋಗ ಜಾರಿಗೊಳಿಸುವಂತೆ ನಿರಂತರವಾಗಿ ಹೋರಾಟ ಮಾಡುತ್ತಿದೆ. ಆದರೆ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷವಾಗಲೀ ಒಳಮೀಸಲಾತಿ ಜಾರಿಗೊಳಿಸಲು ಮುಂದಾಗದೇ ಮೀನಾಮೇಷ ಎಣಿಸುತ್ತಿವೆ” ಎಂದು ಆರೋಪಿಸಿ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ ರಾಜಕೀಯ ಪಕ್ಷಗಳು ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿ ಮತ ಪಡೆದು ನಂತರ ಅಧಿಕಾರ ಏರಿದ ಮೇಲೆ ಜನಾಂಗವನ್ನು ಸಂಪೂರ್ಣವಾಗಿ ಮರೆತು ಮೋಸ ಮಾಡುತ್ತಿವೆ. ಅಲ್ಲದೆ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಒಳಮೀಸಲಾತಿಗಾಗಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.
ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ ಮಾತನಾಡಿ, ಮಾದಿಗ ಜನಾಂಗವೂ ಒಳ ಮೀಸಲಾತಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ರಾಜಕೀಯ ಪಕ್ಷಗಳು ಮಾದಿಗ ಜನಾಂಗದ ಮತ ಪಡೆದು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಕೇವಲ ಆಶ್ವಾಸನೆ ನೀಡಿ ಸಮುದಾಯಕ್ಕೆ ಮೋಸ ಮಾಡಿದ್ದು, ಮುಂಬರುವ ದಿನಗಳಲ್ಲಿ ಇಂಥ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಚ್ಚರಿಸಿದರು.
ವೇದಿಕೆಯ ತಾಲೂಕು ಉಪಾಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ ಮಾತನಾಡಿ, “ಪರಿಶಿಷ್ಟಜಾತಿಗೆ ಸರಕಾರ ಸಾಮಾಜಿಕ ನ್ಯಾಯದಡಿ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಜನಾಂಗಕ್ಕೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಮುಂದುವರಿಯಲು ಅನುಕೂಲ ಮಾಡಿಕೊಡಬೇಕು. ಶೀಘ್ರದಲ್ಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಗ್ರೇಟ್-2 ತಹಶೀಲ್ದಾರ್ ಪರಶಿವಮೂರ್ತಿ ಮಾತನಾಡಿ, ಮೇಲಿನ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗುವುದು ಎಂದರು. ಅವರ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಬಾಬು ಜಗಜೀವನ್‌ರಾಮ್ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಕಲ್ಲಂಬಾಳು ನಾಗಣ್ಣ, ಉಪಾಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ, ಗೌರವಾಧ್ಯಕ್ಷ ವೈ.ಕುಂಠಯ್ಯ, ಗಡಿ ಯಜಮಾನರಾದ ವೆಂಕಟೇಶ್, ಸ್ವಾಮಿ, ಹನು, ಕಾಳಪ್ಪಾಜಿ, ಕುಮಾರ್, ಪ್ರಕಾಶ್ ಕೋಟೆ, ಸುರೇಶ್, ಪಾಟೀಲ್.ಚಿನ್ನಸ್ವಾಮಿ, ಸರಗೂರು ಕೃಷ್ಣ, ಗ್ರಾಮೀಣ ಮಹೇಶ್ ಹಂಚೀಪುರ, ಚಾಮರಾಜು, ವೆಂಕಟಶ್, ಪಾಟೀಲ್, ಮಲ್ಲೇಶ್, ಜವರಪ್ಪ, ಮಧು, ಮಹೇಶ್, ಮಹದೇವಸ್ವಾಮಿ, ಸಣ್ಣಪ್ಪ, ಹೇಜೂರಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


