ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎನ್.ಎಚ್.ಎಂ. ಅಡಿಯಲ್ಲಿ ಒಳಗುತ್ತಿಗೆ ಆಧಾರದಲ್ಲಿ ನೌಕರರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿ ತಮ್ಮ ಹುದ್ದೆಗಳ ಖಾಯಂಗಾಗಿ ಕಳೆದ 25 ದಿನಗಳಿಂದ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳು ಪರದಾಡುವಂತೆ ಆಗಿದೆ.
ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಎನ್ ಹೆಚ್ ಎಂ ,ಅಡಿಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಸುಮಾರು 25 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಐ ಸಿ ಯು, ಲೇಬರ್ ವಾರ್ಡ್, ಎಕ್ಸರೇ, ಬ್ಲಡ್ ಬ್ಯಾಂಕ್, ರಕ್ತ ಪರೀಕ್ಷಾ ಕೇಂದ್ರ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಂತಹ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು 24/7 ಸೇವೆ ದೊರೆಯುವ ಈ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹಾಗೂ ಕಾಯಿಲೆಗಳ ಪರೀಕ್ಷೆಗಳಿಗಾಗಿ ಬರುವ ರೋಗಿಗಳಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ.
ಇದರಿಂದಾಗಿ ಸಾರ್ವಜನಿಕರು ಖಾಸಗಿ ಆಸ್ಪತ್ರೆಗಳಿಗೆ ಹಾಗೂ ರಕ್ತ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಹಣ ನೀಡಿ, ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಬಡತನದ ಬೇಗೆಯಲ್ಲಿ ಹಾಗೂ ರೈತರು ಬೆಳೆದ ತಮ್ಮ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲಿ ತಮ್ಮ ಕಾಯಿಲೆಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯದೆ ಕಂಗಾಲಾಗಿರುವುದು ವಿಪರ್ಯಾವಾಗಿದೆ.
ತಕ್ಷಣವೇ ಸರ್ಕಾರ ಎನ್ ಹೆಚ್ ಎಂ ಅಡಿಯಲ್ಲಿ ಒಳಗುತ್ತಿಗೆಯಲ್ಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾರ್ವಜನಿಕರ ಹಿತಕಾಯಬೇಕಿದೆ.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA