ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರಿಗೆ ವೃದ್ಧನೊಬ್ಬರ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಈ ಘಟನೆ ಉತ್ತರ ಪ್ರದೇಶದ ಬಿಸೋಲಿಯಲ್ಲಿ ನಡೆದಿದೆ ಎನ್ನಲಾಗಿದೆ. ಈ ಮುದುಕ ಯುವತಿಯೊಬ್ಬಳ ಕೂದಲನ್ನು ಮುಟ್ಟಲು, ಅದನ್ನು ಮುದ್ದಿಸಲು ಯತ್ನಿಸುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ವಿಡಿಯೊದಲ್ಲಿ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ವಿಚಿತ್ರವಾಗಿ ವರ್ತಿಸುತ್ತಿರುವುದು, ಅನೇಕರ ಗಮನವನ್ನು ಸೆಳೆದಿದೆ. ಘಟನೆಯಲ್ಲಿ ಮಹಿಳೆಯ ಹಿಂದೆ ಬೊಕ್ಕ ತಲೆಯ ಮುದುಕನೊಬ್ಬ ಅವಳ ಕೂದಲನ್ನು ಸ್ಪರ್ಶಿಸಲು ಮತ್ತು ವಾಸನೆ ನೋಡಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಜುಲೈ 31ರಂದು ಟ್ವಿಟ್ಟರ್ ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಇದೀಗ ಈ ವಿಡಿಯೊ ವೈರಲ್ ಆಗಿದೆ. ವೃದ್ಧನ ವಿಚಿತ್ರ ವರ್ತನೆಗೆ ಸಾರ್ವಜನಿಕರು ಆಕ್ರೋಶ, ಅಚ್ಚರಿ ವ್ಯಕ್ತಪಡಿಸಿದ್ದಾರೆ.
Incident from Uttar Pradesh Bisauli A old man h@rrassing a girl in Broad daylight pic.twitter.com/lxZiXTwJFG
— Ghar Ke Kalesh (@gharkekalesh) July 31, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296