ಮೀರತ್: ನಡುರಸ್ತೆಯಲ್ಲಿ ಬಾಲಕಿಯನ್ನು ಆಕೆಯ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ನಡೆದಿದೆ.
ಹತ್ಯೆಗೀಡಾದ ಬಾಲಕಿಯನ್ನು ಅನ್ಯಧರ್ಮದ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಈ ಮರ್ಯಾದಾ ಹತ್ಯೆ ನಡೆದಿದೆ.ಹತ್ಯೆಯ ದೃಶ್ಯವನ್ನು ನೆರೆಹೊರೆಯವರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
16 ವರ್ಷದ ಅಪ್ರಾಪ್ತ ಬಾಲಕಿ ಹಿಂದೂ ಯುವಕನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಲು ಪ್ಲಾನ್ ಮಾಡಿದ್ದಾಳೆ ಎಂದು ಗೊತ್ತಾಗುತ್ತಿದ್ದಂತೆ ಸಿಟ್ಟಿಗೆದ್ದ ಅಣ್ಣ ಹಾಡಹಗಲೇ ನಡುರಸ್ತೆಯಲ್ಲಿ ಆಕೆಯನ್ನು ಭೀಕರವಾಗಿ ಕೊಲೆಮಾಡಿದ್ದಾರೆ.
ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೃತ ಯುವತಿ ಮುಸ್ಲಿಂ ಕುಟುಂಬಕ್ಕೆ ಸೇರಿದವಳಾಗಿದ್ದು,ಆಕೆ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು.ಇದರಿಂದ ಮರ್ಯಾದೆಗೆ ಅಂಜಿ ಆಕೆಯನ್ನು ಕೊಲೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296