ತುಮಕೂರು: ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಮಾಯವಾಗಿದ್ದರೂ ಬಿಜೆಪಿಯವರು ಇನ್ನೂ ಅವರ ಹೆಸರು ಜಪಿಸುತ್ತಿದ್ದಾರೆ, ಉಳಿದ ನಾಯಕರಿಗೆ ಧಮ್ ಇಲ್ಲವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿಯನ್ನು ವ್ಯಂಗ್ಯವಾಡಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ಈವರೆಗೆ ದೇಶದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ತುಮಕೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿಯವರು ಇನ್ನೂ ಮೋದಿ ಹೆಸರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಉಳಿದ ನಾಯಕರಿಗೆ ಧಮ್ ಇಲ್ಲವೆ ಎಂದು ಪ್ರಶ್ನಿಸಿದರು.
ಮೋದಿ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿದ್ದರು. ಆ ಮೂಲಕ ವೋಟು ಕೊಡಿ ಎಂದು ಕೇಳಿದ್ದರು. ನಂತರ ಬೆಲೆ ಏರಿಕೆ ಮಾಡಿ ದುಬಾರಿ ಕಾಲ ನಿರ್ಮಿಸಿದ್ದಾರೆ. ಇಂತಹ ಕೆಲಸ ಮಾಡಲು ನಾಚಿಕೆ ಆಗುವುದಿಲ್ಲವೆ? ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಬಿಜೆಪಿ ಕೈಗೊಂಡಿರುವ ಜನಸ್ವರಾಜ್ಯ ಯಾತ್ರೆಯನ್ನು ಲೇವಡಿ ಮಾಡಿದ ಅವರು,’ಶಂಖು, ಜಾಗಟೆ ಬಾರಿಸಿಕೊಂಡು, ಕೊಂಬು, ಕಹಳೆ ಊದಿಕೊಂಡು ಹೊರಟಿದ್ದಾರೆ. ಕೊಂಬು, ಕಹಳೆಗಿದ್ದ ಬೆಲೆಯನ್ನು ಕಳೆಯುತ್ತಿದ್ದಾರೆ. ನಾಲ್ಕು ತಂಡ ಮಾಡಿಕೊಂಡು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಗ್ರಾಮ ಸ್ವರಾಜ್ಯ, ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ ಇದ್ದವರು ಈಗ ಯಾತ್ರೆ ಮಾಡಿ ವೋಟು ಕೇಳುತ್ತಿದ್ದಾರೆ. ಮಾನ ಮರ್ಯಾದೆ ಇಲ್ಲದವರು ಎಂದು ವಾಗ್ದಾಳಿ ನಡೆಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700