ಪಾವಗಡ: ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿ ಕ್ಯಾತಗಾನಚರ್ಲ ಗ್ರಾಮದ ಅಪರ್ಣ(30) ಎಂಬ ಮಹಿಳೆ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಮಹಿಳೆಯು ಗ್ರಾಮದ ವ್ಯಕ್ತಿಯೊಬ್ಬರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಅಪರ್ಣಳ ಗಂಡ ನರಸಿಂಹ ಆರೋಪಿಸಿದ್ದಾರೆ.
ತಾನು ಶಿವಮಾಲೆ ಧರಿಸಿದ್ದರಿಂದ ಭಾನುವಾರ ರಾತ್ರಿ ದೇವಸ್ಥಾನದಲ್ಲಿ ಮಲಗಿದ್ದೆ. ಪಕ್ಕದ ಮನೆಯವರು ತನ್ನ ಹೆಂಡತಿ ನೇಣು ಹಾಕಿಕೊಂಡಿರುವ ಬಗ್ಗೆ ಸೋಮವಾರ ಬೆಳಿಗ್ಗೆ ನರಸಿಂಹನಿಗೆ ಮಾಹಿತಿ ನೀಡಿರುವುದಾಗಿ ಅವರು ತಿಳಿಸಿದರು.
ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಮಂಜುನಾಥ್, ಸಬ್ ಇನ್ಸೆಪೆಕ್ಟರ್ ಲಕ್ಷ್ಮಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx