ನವದೆಹಲಿ: ರಾಜ್ಯದಲ್ಲಿ ಇಂದು ಇಬ್ಬರಿಗೆ ಒಮಿಕ್ರಾನ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈಗ ಪತ್ತೆಯಾಗಿರುವ ಒಮಿಕ್ರಾನ್ ಅಷ್ಟೇನೂ ಅಪಾಯಕಾರಿ ಅಲ್ಲ ಎಂದು ತಿಳಿಸಿದ್ದಾರೆ.
ಒಮಿಕ್ರಾನ್ ತಡೆ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇನೆ. ತಜ್ಞರು ಆತಂಕ ಪಡುವಂತಿಲ್ಲ ಎಂದಿದ್ದಾರೆ. ಹೀಗಾಗಿ ಅಗತ್ಯ ಬಿದ್ರೆ ಮಾರ್ಗಸೂಚಿ ಬದಲಾಯಿಸುತ್ತೇವೆ ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಒಮಿಕ್ರಾನ್ ಚಿಕಿತ್ಸೆಗೆ ಸಕಲ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಒಮಿಕ್ರಾನ್ ಅಷ್ಟೇನೂ ಅಪಾಯವಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಈ ವೇಳೆ ಮನವಿ ಮಾಡಿಕೊಂಡಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700