ತುಮಕೂರು: ಓಮಿಕ್ರಾನ್ ಆತಂಕದ ನಡುವೆ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 10 ದಿನದಲ್ಲಿ 109 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಪೈಕಿ 42 ಜನ ಮಕ್ಕಳು ಕೂಡ ಸೇರಿದ್ದಾರೆ ಎನ್ನಲಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಕಳೆದ 10 ದಿನದಲ್ಲಿ 1 ರಿಂದ 18 ವರ್ಷದೊಳಗಿನ 42 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಮಕ್ಕಳಲ್ಲಿ ಗಂಭೀರ ಸ್ವರೂಪದ ಲಕ್ಷಣ ಇಲ್ಲದೇ ಇದ್ದರೂ ಪೋಷಕರಲ್ಲಿ ಆತಂಕ ಶುರುವಾಗಿದೆ. ಈ ನಡುವೆ 3ನೇ ಅಲೆ ಮಕ್ಕಳಿಗೆ ಬಾಧಿಸಲಿದೆ ಎಂಬ ತಜ್ಞರ ಅಭಿಪ್ರಾಯವು ಪೋಷಕರಲ್ಲಿ ಇನ್ನಷ್ಟು ಆತಂಕವನ್ನು ಸೃಷ್ಟಿಸಿದೆ.
ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದ್ದ 35 ಜನರ ಸ್ವಾಬ್ ಅನ್ನು ಓಮಿಕ್ರಾನ್ ಟೆಸ್ಟ್ ಗೆ ಕಳಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ. ಇನ್ನೊಂದೆಡೆ ಮಕ್ಕಳಿಗೆ ಶಾಲೆ ಆರಂಭವಾಗಿದ್ದು, ಮಕ್ಕಳ ಓಡಾಟದಿಂದ ಸೋಂಕು ಹೆಚ್ಚಳವಾಗುವ ಭೀತಿ ಕೂಡ ಸೃಷ್ಟಿಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700