ತುಮಕೂರು: ದಲಿತ ಕುಟುಂಬಗಳಿಗೆ ಉದ್ದೇಶ ಪೂರ್ವಕವಾಗಿ ಹಕ್ಕು ಪತ್ರಗಳನ್ನು ನೀಡದಿರುವ ಹಿನ್ನೆಲೆ ನೊಂದ ಗ್ರಾಮಸ್ಥರು ಆಹೋರಾತ್ರಿ ಧರಣಿ ನಡೆಸುತ್ತಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಕೋಣನಕೆರೆ, ಕರಡಿಕಲ್ಲು, ಕುನ್ನಾಲ, ಕಿಟ್ಟದಕುಪ್ಪೆ, ಮಡೇನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ನೀಡಿದ ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಯಲ್ಲಿ ಕೆಲ ದಲಿತ ಕುಟುಂಬಗಳಿಗೆ ಉದ್ದೇಶ ಪೂರ್ವಕವಾಗಿ ಹಕ್ಕು ಪತ್ರಗಳನ್ನು ನೀಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ತಹಶೀಲ್ದಾರ ಬಿ. ಆರತಿ ಹಾಗೂ ಇ.ಓ.ಶಿವಪ್ರಕಾಶ ಅವರ ವಿರುದ್ಧ ಆಹೋರಾತ್ರಿ ಧರಣಿ ನಡೆಯುತ್ತಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿದ್ದು, ಈ ವೇಳೆ ಪ್ರತಿಭಟನಾಕಾರರು, ತಹಶೀಲ್ದಾರ್ ಹಾಗೂ ಕಾರ್ಯ ನಿರ್ವಣಾಧಿಕಾರಿ ವಿರದ್ಧ ಕ್ರಮ ಕೈಗೊಳ್ಳುವುದಕ್ಕೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ದಲಿತ ಮುಖಂಡರುಗಳು ಹಾಜರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx