ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನವೆಂಬರ್ 11ರಂದು ಬೆಳಿಗ್ಗೆ 11:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಒನಕೆ ಓಬವ್ವ ಜಯಂತ್ಯುತ್ಸವ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟಿಸಲಿದ್ದು, ನಗರ ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಜಿ.ಎಸ್. ವೃತ್ತದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಚರ್ಚ್ ವೃತ್ತ, ಅಶೋಕ ರಸ್ತೆ ಮೂಲಕ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಜಾನಪದ ಕಲಾತಂಡಗಳೊಂದಿಗೆ ಒನಕೆ ಓಬವ್ವನವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಸಮುದಾಯದ ಮುಖಂಡರು, ವಿವಿಧ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕೆ. ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q