ಸ್ವಾತಂತ್ರ್ಯ ದಿನಾಚರಣೆಯಂದು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್ ಬಾಗ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್‌ಸಿಎಲ್, ಲಾಲ್ ಬಾಗ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ 15ರ ಆಗಸ್ಟ್ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆದಂದು ಲಾಲ್ ಬಾಗ್ ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಗಳನ್ನು ಪರಿಚಯಿಸಲಿದೆ ಎಂದು ತಿಳಿಸಿದೆ.
15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರುಪಾಯಿಗೆ ನಿಗಧಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


