ಮೊದಲ ಜನಸ್ಪಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ತರುವಾಯ ಮತ್ತೊಮ್ಮೆ ಜನರ ಬಳಿಗೆ ಸರ್ಕಾರವನ್ನು ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ನೇತೃತ್ವದಲ್ಲಿ ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ನಿಮ್ಮ ಅಹವಾಲುಗಳೊಂದಿಗೆ ಬನ್ನಿ, ನಾವು ಅವುಗಳನ್ನು ಆಲಿಸಿ, ಪರಿಹರಿಸುತ್ತೇವೆ ಎಂದಿದ್ದಾರೆ.


