ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರು ಹುತಾತ್ಮರಾದ ದಿನದ ಸ್ಮರಣಾರ್ಥವಾಗಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ನೌಕರರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


