ತುಮಕೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಮಧುಗಿರಿ ವಕೀಲರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಧುಗಿರಿ ಬೆಟ್ಟ ಮತ್ತು ನ್ಯಾಯಾಲಯದ ಆವರಣದಲ್ಲಿ “ಒಂದು ಮರ–ತಾಯಿಯ ಹೆಸರಿನಲ್ಲಿ” ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗೌರವಾನ್ವಿತ ನ್ಯಾಯಮೂರ್ತಿ ಆರ್. ದೇವದಾಸ್ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಸೇರಿದಂತೆ ಮತ್ತಿತರ ಗಣ್ಯರು, ಅಧಿಕಾರಿಗಳು ಉಪಸ್ಥಿತರಿರುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q