ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಹೊರಟ್ಟಿದ್ದು ,ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಅವರ ಪತ್ನಿ ಜಿಲ್ ಬಿಡೆನ್ ಅವರು ಜೂನ್ 22 ರಂದು ಶ್ವೇತಭವನದಲ್ಲಿ ನರೇಂದ್ರ ಮೋದಿ ಅವರಿಗೆ ಔತಣಕೂಟವನ್ನು ಏರ್ಪಡಿಸಲಿದ್ದಾರೆ ಎಂದು ಶ್ವೇತಭವನದ ಹೇಳಿಕೆಯ ಮೂಲಕ ಪ್ರಕಟಿಸಲಾಗಿದೆ.
ಬಿಡೆನ್ ಅವರ ಆಹ್ವಾನದ ಮೇರೆಗೆ ಮೋದಿ ಅಧಿಕೃತ ಭೇಟಿಗಾಗಿ ಅಮೆರಿಕಕ್ಕೆ ಬರುತ್ತಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಮೋದಿಯವರ ಅಮೆರಿಕ ಭೇಟಿಯನ್ನು ದೃಢಪಡಿಸಿದೆ. ಭಾರತದೊಂದಿಗಿನ ಬಾಂಧವ್ಯವನ್ನು ಬಲಪಡಿಸುವುದು ಮತ್ತು ಭಾರತದ ರಕ್ಷಣಾ ಕ್ಷೇತ್ರ ಸೇರಿದಂತೆ ರಷ್ಯಾದ ನಿರಂತರ ಪಾಲ್ಗೊಳ್ಳುವಿಕೆಗೆ ಪರ್ಯಾಯವನ್ನು ಒದಗಿಸುವುದು ಯುಎಸ್ ನ ಕ್ರಮವಾಗಿದೆ.
ತಂತ್ರಜ್ಞಾನ, ಕೈಗಾರಿಕೆ ಮತ್ತು ವ್ಯಾಪಾರದಂತಹ ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಮೋದಿ-ಬಿಡೆನ್ ಸಭೆಯಲ್ಲಿ ಚರ್ಚಿಸಲಾಗುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy