ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತಿಯಿಂದ ನವೆಂಬರ್ 11ರಂದು ಆಚರಿಸಲಾಗುವ “ಒನಕೆ ಓಬವ್ವ’ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಛಲವಾದಿ ಸಮುದಾಯದ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವ–ಬರಹದ ಅರ್ಜಿಯನ್ನು ನವೆಂಬರ್ 5ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಠ್ಯ ಬಾಳನಕಟ್ಟೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2275204ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಸ್ಟರ್ ಕು. ಮಿರ್ಜಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



