nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ವೀರವನಿತೆ ಒನಕೆ ಓಬವ್ವ, ಕನಕದಾಸ ಜಯಂತಿ ಆಚರಣೆ
    ಕೊರಟಗೆರೆ November 12, 2022

    ಕೊರಟಗೆರೆ: ವೀರವನಿತೆ ಒನಕೆ ಓಬವ್ವ, ಕನಕದಾಸ ಜಯಂತಿ ಆಚರಣೆ

    By adminNovember 12, 2022No Comments2 Mins Read
    koratagere

    ಕೊರಟಗೆರೆ: ತಾಲ್ಲೂಕು ಆಡಳಿತ ವತಿಯಿಂದ ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಯನ್ನು ತಹಶೀಲ್ದಾರ್  ರವರ ಕಚೇರಿ ಆವರಣದಲ್ಲಿ ತಾಲ್ಲೂಕು ಕುರುಬ ಸಮುದಾಯದ ಸದಸ್ಯರು ಹಾಗೂ ಚಲವಾದಿ ಸಮುದಾಯದ ಸದಸ್ಯರೊಂದಿಗೆ ಸರಳವಾಗಿ ಆಚರಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷಯೆ ವಹಿಸಿ ಮಾತನಾಡಿದ ತಹಶೀಲ್ದಾರ್ ನಾಹಿದಾ ಜಮ್ ಜಮ್, ನಮ್ಮ ನಾಡಿಗೆ ಕೀರ್ತಿ ತರುವ ಪಾತ್ರದಲ್ಲಿ ವೀರ ವನಿತೆಯರ ಪಾತ್ರವೂ ಬಹುಮುಖ್ಯವಾಗಿದೆ. ಅದರಲ್ಲೂ ವೀರವನಿತೆ ಒನಕೆ ಓಬವ್ವ ಎಂದ ಕೂಡಲೇ ನೆನಪಾಗುವುದು ಚಿತ್ರದುರ್ಗದ ಕೋಟೆ ಹೈದರಾಲಿಯ ಸೇನೆಯೊಂದಿಗೆ ಏಕಾಂಗಿಯಾಗಿ ಹೋರಾಡಿದ ವೀರವನಿತೆ ಒನಕೆ ಓಬವ್ವ ಆಕೆ ಸಾಹಸದ ಕಥೆಯನ್ನು ಮುಂದಿನ ಪೀಳಿಗೆಗೂ ಸಾರುವಂತದ್ದು. ಅಂತಹ ವೀರ ವನಿತೆಯರು ಜನಿಸಿರುವ  ಈ ಭೂಮಿ ನಿಜಕ್ಕೂ ಪುಣ್ಯಭೂಮಿ ಎಂದರೆ ತಪ್ಪಾಗಲಾರದು. ಇಂತಹ ಮಹಾನ್ ವೀರ ವನಿತೆಯರ ಜಯಂತಿಯನ್ನು ಆಚರಿಸಲು ಸರಕಾರವು ಅನುವು ಮಾಡಿಕೊಟ್ಟ ಸಾರ್ವಜನಿಕರು ಮತ್ತು  ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.


    Provided by
    Provided by

    ತಾಲ್ಲೂಕು ಕುರುಬ ಸಮುದಾಯದ ಅಧ್ಯಕ್ಷ ಮೈಲಾರಪ್ಪ ಮಾತನಾಡಿ, ಕನಕದಾಸರು ಕೇವಲ ಕುರುಬ ಸಮುದಾಯಕ್ಕೆ ಮಾತ್ರ ಸೇರಿದವರಲ್ಲ ನಾಡಿನ ಸಮಸ್ತ ಸಮುದಾಯಗಳಿಗೆ ಸೇರಿದವರು  ಅವರ ಕೊಡುಗೆಯನ್ನು  ನಾವುಗಳು ಪ್ರತಿನಿತ್ಯ ಸ್ಮರಿಸಬೇಕು ಅಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು ..

    ತಾಲ್ಲೂಕು ಕುರುಬ ಸಮುದಾಯದ ಮುಖಂಡರಾದ ರಂಗಧಾಮಯ್ಯ ಮಾತನಾಡಿ, ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು ಕನ್ನಡ ಭಾಷೆಯ ಪ್ರಸಿದ್ಧ ಸಹಕಾರಿಯಾಗಿ ಜನಮನ್ನಣೆ ಗಳಿಸಿದ ಇವರು, ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಏಕೈಕ ಶುದ್ಧ ದಾಸರು. ಇವರು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ನಮ್ಮ ಕನಕದಾಸರು ಅವರ 535ನೇ ಜನ್ಮದಿನಾಚರಣೆ ಆಚರಿಸುವ ಭಾಗ್ಯ ನಮ್ಮದಾಗಿದೆ ಎಂದು ತಿಳಿಸಿದರು.

    ಇನ್ನೂ ಕಾರ್ಯಕ್ರಮದ ಸಂದರ್ಭದಲ್ಲಿ ತಾಲ್ಲೂಕು ಕುರುಬ ಸಮುದಾಯದ ಅಧ್ಯಕ್ಷರಾದ ಮೈಲಾರಪ್ಪ , ಜಿಲ್ಲಾ ನಿರ್ದೇಶಕರಾದ ನಾಗಭೂಷಣ್ , ರಂಗಶಾಮಯ್ಯ, ರಂಗರಾಜು, ನಂಜುಂಡ, ಲಕ್ಷ್ಮೀಪ್ರಸಾದ್, ಆನಂದ್ ಸೇರಿದಂತೆ ತಾಲ್ಲೂಕು ಛಲವಾದಿ ಸಮುದಾಯದ ಅಧ್ಯಕ್ಷರಾದ ಜಿ.ಎಸ್. ಹನುಮ ಮೂರ್ತಿ, ಉಪಾಧ್ಯಕ್ಷ ಹನುಮಂತರಾಯಪ್ಪ, ಕಾರ್ಯದರ್ಶಿ ಪುಟ್ಟರಾಜು, ಖಜಾಂಚಿ ಗಿರೀಶ್ ಸೇರಿದಂತೆ ಮುಖಂಡರು ಪದಾಧಿಕಾರಿಗಳು ಹಾಗೂ  ತಾಲ್ಲೂಕು ಕಚೇರಿಯ ಎಲ್ಲ ಅಧಿಕಾರಿ ವರ್ಗದವರು  ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.