nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಷ್ಮೀ ಹೆಬ್ಬಾಳಕರ್ ಶ್ರಮ ಸಾರ್ಥಕ; ಒಂದೇ ವಾರದಲ್ಲಿ ಅದ್ಭುತ ಪ್ರವಾಸಿ ತಾಣವಾದ ರಾಜಹಂಸಗಡ
    ಜಿಲ್ಲಾ ಸುದ್ದಿ March 13, 2023

    ಲಕ್ಷ್ಮೀ ಹೆಬ್ಬಾಳಕರ್ ಶ್ರಮ ಸಾರ್ಥಕ; ಒಂದೇ ವಾರದಲ್ಲಿ ಅದ್ಭುತ ಪ್ರವಾಸಿ ತಾಣವಾದ ರಾಜಹಂಸಗಡ

    By adminMarch 13, 2023No Comments2 Mins Read
    rajahamsagada

    ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಶ್ರಮ ಸಾರ್ಥಕವಾಗಿದೆ. ರಾಜಹಂಸಗಡವನ್ನು ದೊಡ್ಡ ಧಾರ್ಮಿಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕೆನ್ನುವ ಅವರ ಕನಸು ನನಸಾಗಿದೆ. ನವೀಕೃತ ಸಿದ್ಧೇಶ್ವರ ಮಂದಿರ ಮತ್ತು ಛತ್ರಪತಿ ಶಿವಾಜಿ ಮೂರ್ತಿ ಉದ್ಘಾಟನೆಯಾಗಿ ಒಂದೇ ವಾರದಲ್ಲಿ ರಾಜಹಂಸಗಡ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

    ಭಾನುವಾರ ಒಂದೇ ದಿನ 10 ಸಾವಿರಕ್ಕಿಂತ ಹೆಚ್ಚು ಪ್ರವಾಸಿಗರು ಆಗಮಿಸಿ, ಅಭಿವೃದ್ಧಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
    ಲಕ್ಷ್ಮೀ ಹೆಬ್ಬಾಳಕರ್ ಶಾಸಕರಾದ ದಿನದಿಂದಲೇ ರಾಜಹಂಸಗಡ ಕೊಟೆಯನ್ನು ಪರಿಪೂರ್ಣ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕೆನ್ನುವ ಕನಸು ಹೊತ್ತಿದ್ದರು. ಅಲ್ಲಿ ರಾಷ್ಟ್ರದಲ್ಲೇ ಭವ್ಯವಾದ ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಬೇಕೆನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡಿದರು. ಯಾವ ಅಡ್ಡಿ, ಆತಂಕಕ್ಕೂ ಬಗ್ಗದೆ ನಿರಂತರ ಪ್ರಯತ್ನ ಮಾಡಿ ಯಶಸ್ವಿಯಾದರು. ಮಾರ್ಚ್ 5ರಂದು ನವೀಕೃತ ಸಿದ್ದೇಶ್ವರ ಮಂದಿರ ಮತ್ತು ಬೃಹತ್ ಛತ್ರಪತಿ ಶಿವಾಜಿ ಮೂರ್ತಿ ಶಾಸ್ತ್ರೋಕ್ತವಾಗಿ ಉದ್ಘಾಟನೆಯಾಯಿತು.

    ಉದ್ಘಾಟನೆಯ ದಿನವೇ ಒಂದೂವರೆ ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸಿ, ಹರ್ಷೋದ್ಘಾರಗೈದಿದ್ದರು. ಅಲ್ಲಿಂದ ಪ್ರತಿನಿತ್ಯ 2 -3 ಸಾವಿರ ಪ್ರವಾಸಿಗರು ಆಗಮಿಸಿ, ಖುಷಿಪಡುತ್ತಿದ್ದಾರೆ. ಹಿಂದೆ ಯಾರಿಂದಲೂ ಆಗದ ಕೆಲಸವನ್ನು ಮಾಡಿದ್ದಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರಶಂಸೆಯ ಸುರಿಮಳೆಗೈಯುತ್ತಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ಸಾಲುಗಟ್ಟಿ ವಾಹನಗಳು ರಾಜಹಂಸಗಡದ ಕಡೆಗೆ ಆಗಮಿಸುತ್ತಿದ್ದವು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು.

    ಮುಂದಿನ ದಿನಗಳಲ್ಲಿ ರಾಜಹಂಸಗಡ ರಾಷ್ಟ್ರದಲ್ಲೇ ಒಂದು ಅತ್ಯುತ್ತಮ ಮತ್ತು ಅಪರೂಪದ ಪ್ರವಾಸಿ ತಾಣವಾಗಿ ಬೆಳೆಯುವ ಸೂಚನೆ ವಾರದಲ್ಲೇ ಕಾಣಿಸಿದೆ. ಇನ್ನೂ ಕೆಲವೊಂದು ಸಣ್ಣ ಪುಟ್ಟ ಕೆಲಸಗಳಾಗಬೇಕಿದ್ದು, ಅವುಗಳ ಕಡೆಗೆ ಲಕ್ಷ್ಮೀ ಹೆಬ್ಬಾಳಕರ್ ಗಮನಹರಿಸಿದ್ದಾರೆ.

    ಸಿದ್ದೇಶ್ವರ ಮಂದಿರವನ್ನು ಇನ್ನೂ ಸ್ವಲ್ಪ ಅಭಿವೃದ್ಧಿಪಡಿಸಬೇಕಿದೆ. ಅಲ್ಲೊಂದು ಸಣ್ಣ ವಾಟರ್ ಫಾಲ್ಸ್ ಮಾಡುವ ಯೋಜನೆ ಹೊಂದಿದ್ದಾರೆ. ಸಣ್ಣಪುಟ್ಟ ಕೆಲಸವನ್ನು ಆದಷ್ಟು ಬೇಗ ಮಾಡಿಸುವ ಯೋಜನೆಯನ್ನು ಅವರು ರೂಪಿಸಿದ್ದಾರೆ.

    ಒಟ್ಟಾರೆ, ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸು ನನಸಾಗಿದೆ, ಶ್ರಮ ಸಾರ್ಥಕವಾಗಿದೆ. ಅವರ ಕೆಲಸಕ್ಕೆ ಎಲ್ಲೆಡೆಯಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     


    Provided by
    Provided by
    admin
    • Website

    Related Posts

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.