ಭಾರತದಂತ ದೇಶದ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವುದು ಅಸಾಧ್ಯ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತದಲ್ಲಿ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು
ಒಂದು ಭಾಷೆ ಮತ್ತು ಒಂದು ಧರ್ಮವನ್ನು ಪ್ರಚಾರ ಮಾಡುವವರು ನಮ್ಮ ಏಕತೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಅಂತಹವರು ಭಾರತ ಮತ್ತು ಭಾರತೀಯರ ಶತ್ರುಗಳು’ ಎಂದು ಅವರು ಹೇಳಿದರು.
ಸಂಯುಕ್ತ ವ್ಯವಸ್ಥೆಯು ನಮ್ಮ ದೇಶದ ಅಡಿಪಾಯ ಎಂದ ಅವರು, ಬಲಿಷ್ಠ ಸ್ವಾಯತ್ತ ರಾಜ್ಯಗಳನ್ನು ಹೊಂದುವುದೊಂದೇ ಭಾರತ ಅಭಿವೃದ್ಧಿ ಹೊಂದಲು ಇರುವ ಏಕೈಕ ಮಾರ್ಗವಾಗಿದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz