ಒಂದು ಸಮುದಾಯದಿಂದ ಯಾರೂ ಮುಖ್ಯಮಂತ್ರಿಯಾಗಲ್ಲ. ಒಕ್ಕಲಿಗ ಸಮುದಾಯದಂತೆ ನಮ್ಮ ಸಮುದಾಯ ಕೂಡ ದೊಡ್ಡದು. ಹಾಗಂತ ನಾನು ಮುಖ್ಯಮಂತ್ರಿಯಾಗಲು ಆಗುತ್ತದೆಯೇ, ಎಲ್ಲ ಸಮುದಾಯಗಳು ಸೇರಿ ಮುಖ್ಯಮಂತ್ರಿ ಮಾಡುವುದು ಎಂದು ಶಾಸಕ ಜಮೀರ್ ಅಹಮದ್ ಖಾನ್ ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಜನ ಬಯಸುತ್ತಿದ್ದಾರೆ. ನನ್ನ ವೈಯುಕ್ತಿಕ ಅಭಿಪ್ರಾಯವೂ ಇದೇ ಆಗಿದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂಬ ವಿಚಾರವನ್ನು ಮತ್ತೆ ಪ್ರಸ್ತಾಪಿಸಿದ್ದಾರೆ.
ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ. ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ. ಒಂದು ಸಮುದಾಯದಿಂದ ಯಾರೂ ಮುಖ್ಯಮಂತ್ರಿಯಾಗಲ್ಲ. ಎಲ್ಲ ಸಮುದಾಯ ಸೇರಿ ಮುಖ್ಯಮಂತ್ರಿ ಮಾಡುವುದು ಎಂದು ಹೇಳುವ ಮೂಲಕ ಒಕ್ಕಲಿಗ ಸಮುದಾಯ ಮುಖ್ಯಮಂತ್ರಿ ಹುದ್ದೆಗೆ ತಮ್ಮನ್ನು ಬೆಂಬಲಿಸಬೇಕು ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ಎಲ್ಲ ಅಭಿಮಾನಿಗಳು ಸೇರಿ ಮಾಡುತ್ತಿದ್ದೇವೆ. ಇದಕ್ಕೆ ನಾನಾ ಅರ್ಥ ಕಲ್ಪಿಸುವುದು ಬೇಡ ಎಂದು ಶಾಸಕ ಜಮೀರ್ ಅಹಮದ್ ಹೇಳಿದರು.ಬಿಜೆಪಿ ನಾಯಕರು ಐಟಿ-ಇಡಿ ಮೂಲಕ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌ನವರನ್ನು ಬಿಟ್ಟರೆ ಬೇರೆ ಯಾರೂ ಇಲ್ಲವೆ. ಉದ್ದೇಶ ಪೂರ್ವಕವಾಗಿಯೇ ಮುಗಿದು ಹೋಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಓಪನ್ ಮಾಡಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ವಿರುದ್ಧ ತಮ್ಮ ಹೋರಾಟ ನಿರಂತರ. ರಾಜ್ಯದಲ್ಲಿ ನನ್ನ ಮೇಲೆ ಮತ್ತು ಡಿ.ಕೆ. ಶಿವಕುಮಾರ್ ಮೇಲೆ ದಾಳಿ ಮಾಡಿದ್ದಾರೆ. ಬೇರೆ ಯಾರೂ ಇಲ್ಲವ್ವಾ ಎಂದು ಪ್ರಶ್ನಿಸಿದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy