ಶಿವಮೊಗ್ಗ: ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿ ನಡೆದಿದೆ.
ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಅಮೀರ್ ಹಂಜಾನನ್ನು ಬಂಧಿಸಲಾಗಿದೆ.
ಆತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಮಾಗಡಿ ಪೊಲೀಸರು ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಅಮೀರ್ ಹಂಜಾ 2002ರಲ್ಲಿ ನಡೆದ ಹೊಸಹಳ್ಳಿ ವೆಂಕಟೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನಂತರ ವಿವಿಧ ಹೆಸರುಗಳಲ್ಲಿ 80ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಕುರಿತಂತೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಅನೇಕ ಗ್ರಾಮಗಳಿಗೆ ಮೂರು ದಿನಗಳಿಂದ ಭೇಟಿ ನೀಡಿ ತನಿಖೆ ನಡೆಸಿದ ಮಾಗಡಿ ಪೊಲೀಸರು ಅಮೀರ್ ಹಂಜಾನಿಂದ ಮಾಹಿತಿ ಸಂಗ್ರಹಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q