ಬೆಂಗಳೂರು: ರಸ್ತೆ ಸುತ್ತಮುತ್ತಲಿನ ಪ್ರದೇಶಗಳು ಕಾಣುವಂತೆ, ಸಿಸಿ ಕ್ಯಾಮೆರಾ ಅಳವಡಿಸಬೇಕು. ಅವುಗಳು ಹೆಚ್ಚು ಕ್ವಾಲಿಟಿ ಇರಬೇಕು, ಕ್ಯಾಮೆರಾ ಯಾವಕಡೆ ಇರಬೇಕು, ನಿರ್ವಹಣೆ ಬಗ್ಗೆ ಪೋಲೀಸರು ಸಲಹೆ ನೀಡುತ್ತಾರೆ. ಒಂದು ಸಿಸಿ ಟಿವಿ, ಒಬ್ಬರು ಪೋಲೀಸ್ ಸಮ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ರಸ್ತೆಗಳಲ್ಲಿ ವಾಹನ ನಿಲುಗಡೆ, ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ದೂರು ಹೇಳಿದರು.
ನಗರ ವ್ಯಾಪ್ತಿಯ ಎಲ್ಲಾ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಿರಬೇಕು. ಸಿಸಿ ಕ್ಯಾಮೆರಾ ಅಳವಡಿಸದ ಮಾಲೀಕರಿಗೆ ದಂಡ ವಿಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ.
ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಂಗಡಿಗಳಲ್ಲಿ ಪೋಲೀಸರ ಮಾರ್ಗದರ್ಶನದಲ್ಲಿ ಕ್ಯಾಮರಾ ಅಳವಡಿಸಬೇಕು ಎಂದು ಹೇಳಿದರು.
ವರದಿ: ಆಂಟೋನಿ ಬೇಗೂರು


