ಮಧುಗಿರಿ: ಪಕ್ಷ ವಿರೋಧಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಇದೀಗ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ನೆಲಕಚ್ಚ ಬಹುದು ಎಂದು ಹೇಳಿಕೆ ನೀಡಿದ್ದು, ಈ ಮೂಲಕ ಪಕ್ಷಾಂತರದ ಪರೋಕ್ಷ ಹೇಳಿಕೆ ನೀಡಿದ್ದಾರೆ ಎನ್ನುವ ಅನುಮಾನಕ್ಕೆ ಕಾರಣವಾಗಿದೆ. ಈಗಾಲೇ ಕಾಂಗ್ರೆಸ್ ನಲ್ಲಿ ಒಂದು ಕಾಲು ಇನ್ನೊಂದು ಕಾಲು ಎಲ್ಲಿಡಬೇಕು ಅಂತ ರಾಜಣ್ಣ ಯೋಚನೆ ಮಾಡ್ತಾ ಇದ್ದಾರೆ ಎನ್ನುವ ಚರ್ಚೆಗಳಾಗ್ತಿವೆ. ಅದಕ್ಕೆ ಪೂರಕವಾಗಿ ಅವರು ಇದೀಗ ಹೇಳಿಕೆ ನೀಡಿದ್ದಾರೆ.
ತಾಲ್ಲೂಕಿನ ದೊಡೇರಿಯಲ್ಲಿ ಬುಧವಾರ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, 2004ರಲ್ಲಿ ನಾನು ಜೆಡಿಎಸ್ ನಿಂದ ಶಾಸಕನಾಗಿದ್ದಾಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ನೆಲಕಚ್ಚಿತ್ತು. ಮತ್ತೆ ಅಂತಹ ಸಂದರ್ಭ ಬಂದರೂ ಬರಬಹುದು ಎಂದು ಹೇಳಿಕೆ ನೀಡಿದ್ದಾರೆ.
ಮುಂದೆ ನಾನು ಯಾವ ಬಾವುಟ ಹಿಡಿಯಬೇಕು ಎಂಬುದನ್ನು ಕಾಯ್ದು ನೋಡೋಣ ಎಂದೂ ಹೇಳಿಕೆ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನನ್ನ ಅಭಿಮಾನಿಗಳು ಇಂದು ಹಮ್ಮಿಕೊಂಡಿದ್ದ ಬೈಕ್ ರಾಲಿಯಲ್ಲಿ ಯಾರೂ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದಿರಲಿಲ್ಲ. ಅದು ಏಕೆ ಎಂದು ನನಗೂ ಗೊತ್ತಿಲ್ಲ. ಮುಂದೆ ನಾನು ಕೂಡ ಯಾವ ಬಾವುಟ ಹಿಡಿಯುತ್ತೇನೊ ಗೊತ್ತಿಲ್ಲ ಎಂದರು.
ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ. ಜನರ ಬೆಂಬಲವೇ ನನಗೆ ಆನೆ ಬಲ. ಜನರನ್ನು ನಂಬಿ ನಾನು ರಾಜಕಾರಣ ಮಾಡುತ್ತಿದ್ದೇನೆ, ನನಗೂ ಮಧುಗಿರಿಗೂ ಯಾವ ಋಣಾನುಬಂಧವೊ ಗೊತ್ತಿಲ್ಲ. ತುಮಕೂರಿನಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಬೇಕು ಎಂದುಕೊಂಡಿದ್ದ ನನಗೆ ಮಧುಗಿರಿ ಕ್ಷೇತ್ರದ ಜನ ರಾಜಕೀಯ ಜನ್ಮನೀಡಿದರು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


