ಉಡುಪಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಬರುವ ಚುನಾವಣೆಯಿಂದ ಅಭಿವೃದ್ಧಿ ಕೆಲಸ ಕುಂಠಿತ ಆಗುತ್ತದೆ. ಭಾರತದಲ್ಲಿ ವರ್ಷದ ಮೂರ್ನಾಲ್ಕು ತಿಂಗಳು ಚುನಾವಣೆ ನಡೆಯುತ್ತಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತದೆ. ಟೆಂಡರ್ ಕರೆಯಲು ಆಗಲ್ಲ ಎಂದು ವಾದಿಸಿದರು.
ಕೇರಳದಲ್ಲಿ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ್ ನಗರಸಭೆ ಚುನಾವಣೆಗಳು ಒಟ್ಟಿಗೆ ನಡೆಯುತ್ತವೆ. ಇದೇ ರೀತಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೆ ನಡೆಯಬಹುದು. ಚಿಹ್ನೆಯಲ್ಲಿ ನಡೆಯುವ ಚುನಾವಣೆ ಒಟ್ಟಿಗೆ ನಡೆಸಬಹುದು. ದೇಶದಲ್ಲಿ ಸಮಯ, ಶ್ರಮ, ಹಣ ಉಳಿಸಬಹುದು ಎಂದು ಅವರು ಹೇಳಿದರು.


