ನವದೆಹಲಿ: ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದೀಗ ಈ ವರ್ಷ ಗ್ರಾಹಕರನ್ನು ಇಂತಹ ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
2.5 ಲಕ್ಷ ಟನ್ ಈರುಳ್ಳಿ ಸಂಗ್ರಹಿಸಲಾಗಿದ್ದು, ಈರುಳ್ಳಿಯ ಸಮರ್ಪಕ ಪೂರೈಕೆ ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 2022 -23ನೇ ಆರ್ಥಿಕ ವರ್ಷದಲ್ಲಿ 2.5 ಲಕ್ಷ ಪ್ರಮಾಣದ ಈರುಳ್ಳಿ ಸಂಗ್ರಹಿಸಿದೆ.
ಇದುವರೆಗೆ ಸರ್ಕಾರ ಸಂಗ್ರಹಿಸಿದ ದಾಖಲೆಯ ಗರಿಷ್ಠ ಪ್ರಮಾಣ ಇದಾಗಿದೆ. ಆಗಸ್ಟ್ ನಿಂದ ಡಿಸೆಂಬರ್ ವರೆಗೆ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿ ದರ ಏರಿಕೆಯಾಗುತ್ತದೆ. ಈ ಬಾರಿ ಸರ್ಕಾರ ಬೆಲೆ ಏರಿಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz