ಬೆಂಗಳೂರು: ರಾಜ್ಯದಲ್ಲಿ ದಿನಕ್ಕೆ ಈರುಳ್ಳಿ ದರ ಗಗನಕ್ಕೇರುತ್ತಿದೆ. ಇದರಿಂದಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದ್ದು, ಈಗ ಪ್ರತಿ ಕೆಜಿ ಈರುಳ್ಳಿ ದರ 70 ರೂ.ನಿಂದ 80 ರೂ.ಗೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ 100 ರೂ. ಗಡಿ ದಾಟುವ ಆತಂಕ ಎದುರಾಗಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡವರು, ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಇದರ ಬೆನ್ನಲ್ಲೆ ಈರುಳ್ಳಿ ದರ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ರಾಜ್ಯದಲ್ಲಿ ಮಳೆ ಇಳಿಕೆಯಾಗಿದ್ದರೂ ಈರುಳ್ಳಿ ಧಾರಣೆ ಮಾತ್ರ ಕಡಿಮೆಯಾಗುತ್ತಿಲ್ಲ. ಕಳೆದ ತಿಂಗಳು ಸುರಿದ ಅಕಾಲಿಕ ಮಳೆಯಿಂದಾಗಿ ಈರುಳ್ಳಿ ನೀರು ಪಾಲಾಗಿದ್ದು, ಇದರಿಂದಲೇ ಈರುಳ್ಳಿ ದರ ದುಬಾರಿಯಾಗಲು ಪ್ರಮುಖ ಕಾರಣವಾಗಿದೆ.
ಕಳೆದ 3 ತಿಂಗಳಿಂದ ಈರುಳ್ಳಿ ಬೆಲೆ ಗ್ರಾಹಕರ ಕೈ ಸುಡುತ್ತಿದೆ. ಮಳೆ ಇಲ್ಲದಿದ್ದರೂ 70 ರೂ. ಗಡಿ ದಾಟಿದೆ. ಭಾರೀ ಮಳೆಯಿಂದಾಗಿ ಈರುಳ್ಳಿ ಬೆಲೆ ನೆಲ ಕಚ್ಚಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಈರುಳ್ಳಿ ಬರುತ್ತಿಲ್ಲ.ಈಗ ಬರುತ್ತಿರುವ ಈರುಳ್ಳಿಯ ಗುಣಮಟ್ಟ ಚೆನ್ನಾಗಿಲ್ಲ.ಈರುಳ್ಳಿಯನ್ನು ಮಹಾರಾಷ್ಟ್ರದಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದರೂ ನಿರೀಕ್ಷೆಯಷ್ಟು ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಇದು ಈರುಳ್ಳಿ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296