ತುಮಕೂರು: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೌಲಾನ ಆಜಾದ್ ಮಾದರಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ.ಗಳನ್ನು ಮೀರಿರಬಾರದು. ಆಸಕ್ತರು SATS ಸಂಖ್ಯೆ, ಆಧಾರ್ ಸಂಖ್ಯೆ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಂಗವೈಕಲ್ಯ ಪ್ರಮಾಣಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಮೇ 10ರೊಳಗಾಗಿ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ / ಮೌಲಾನ ಆಜಾದ್ ಮಾದರಿ ಶಾಲೆ/ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ಇಲಾಖಾ ವೆಬ್‌ಸೈಟ್ https://dom.karnataka.gov.in ಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW