ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ವೇಷಭೂಷಣ ಖರೀದಿ ಹಾಗೂ ಚಿತ್ರಕಲೆ/ ಶಿಲ್ಪ ಕಲಾಕೃತಿಗಳ ಪ್ರದರ್ಶಕ್ಕಾಗಿ ಧನ ಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಾಮಾನ್ಯ /ವಿಶೇಷ ಘಟಕ / ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್ ಸೈಟ್ www.sevasindhu.karnataka.gov.in ಮೂಲಕ ಡಿಸೆಂಬರ್ 1 ರಿಂದ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816- 2275204, 9986276869, 9916891939 ಅಥವಾ 080-222135300ನ್ನು ಸಂಪರ್ಕಿಸಬಹುದಾಗಿದೆ.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ. ಧನ ಸಹಾಯಕ್ಕೆ ಅರ್ಜಿ ಸಲ್ಲಿಕೆಗೆ ಅನ್ವಯಿಸುವ ಮಾರ್ಗಸೂಚಿಗಳನ್ನು ಸೇವಾ ಸಿಂಧು ಪೋರ್ಟಲ್ ಮತ್ತು ಇಲಾಖೆಯ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


