ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ: ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಪದವಿ ಪೂರ್ವ ಕಾಲೇಜು, ಉನ್ನತೀಕರಣಗೊಂಡ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು/ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿ.ಯು.ಸಿ. ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಈ ಪೈಕಿ ವಿಕಲಚೇತರಿಗೆ ಶೇ.4ರಷ್ಟು ಪ್ರವೇಶ ಮೀಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ/ ಡಾ: ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು/ಶಾಲೆ, ಇಂಟಿಗ್ರೇಟೆಡ್ ಶಾಲೆ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಜಾಲತಾಣ: https://sevasindhuservices.karnataka.gov.in ಮೂಲಕ ಮೇ 17ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂ.ವಾ.ಸಂ. 0816–2273724ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————