ತುಮಕೂರು: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಒಕ್ಕಲಿಗ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವಯಂ ಉದ್ಯೋಗ ನೇರಸಾಲ, ಗಂಗಾಕಲ್ಯಾಣ, ಸ್ವಾವಲಂಭಿ ಸಾರಥಿ, ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು–ಶೈಕ್ಷಣಿಕ ಸಾಲ(ಹೊಸತು/ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ(ಹೊಸ ವಿದ್ಯಾರ್ಥಿಗಳಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvldcl.karnataka.gov.in ಅಥವಾ ನಿಗಮದ ದೂ.ವಾ.ಸಂಖ್ಯೆ 080–29904350/ 29904268 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4