ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ ಒಯು)ವು 2025–26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ (General & I.T.), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ ಕೋರ್ಸ್‌ಗಳಿಗೆ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.
ಕರಾಮುವಿಯು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, 10+2 (ಪದವಿ ಪೂರ್ವ) ಹಾಗೂ 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪದವಿ ಪಡೆಯಬಹುದಾಗಿದೆ.
ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಮಾರ್ಚ್ 31ರವರೆಗೆ ಸಾರ್ವತ್ರಿಕ ರಜಾ ದಿನಗಳಂದು ಕಚೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದೂ.ಸಂ. 0816–2955580, 9886112434, ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರಾದ ಡಾ.ವಿಜಯ್ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


