ಔರಾದ್: ಮಹಾರಾಷ್ಟ್ರದ ನಾಗಪುರದಲ್ಲಿರುವ ಪವಿತ್ರ ದೀಕ್ಷಾಭೂಮಿಗೆ ಭೇಟಿ ನೀಡಲು ಬಯಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅರ್ಹ ಯಾತ್ರಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
2026–27ನೇ ಸಾಲಿನ ಧಮ್ಮ ಪ್ರವರ್ತನಾ ದಿನದ ಅಂಗವಾಗಿ ಅಕ್ಟೋಬರ್ 21ರಂದು ನಾಗಪುರದ ದೀಕ್ಷಾಭೂಮಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಿಂದ ಅಕ್ಟೋಬರ್ 19ರಿಂದ 22ರವರೆಗೆ ಯಾತ್ರಾರ್ಥಿಗಳನ್ನು ನಾಗಪುರಕ್ಕೆ ಕರೆದೊಯ್ದು, ಮರಳಿ ಕರೆತರಲು ಬಸ್ ಹಾಗೂ ರೈಲು ಮೂಲಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 19
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 9
ಅಧಿಕೃತ ವೆಬ್ಸೈಟ್: swd.karnataka.gov.in
ಯಾತ್ರೆಯಲ್ಲಿ ಭಾಗವಹಿಸಲು ಆಸಕ್ತ ಹಾಗೂ ಅರ್ಹರು ನಿಗದಿತ ದಿನಾಂಕದೊಳಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಔರಾದ್ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್–1 ಸಹಾಯಕ ನಿರ್ದೇಶಕರಾದ ಡಾ. ಉತ್ತಮ ಎಸ್. ಸಂಘನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
