ತುಮಕೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ವೀರಶೈವ ಲಿಂಗಾಯತ ಜಾತಿ ಮತ್ತು ಉಪಜಾತಿಗೆ ಸೇರಿದ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಬಸವಬೆಳಗು(ಹೊಸತು/ನವೀಕರಣ), ವಿದೇಶ ವಿದ್ಯಾವಿಕಾಸ(ಹೊಸತು), ಜೀವಜಲ, ಕಾಯಕ ಕಿರಣ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ, ಸ್ವ–ಸಹಾಯ ಸಂಘಗಳಿಗೆ ಉತ್ತೇಜನ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvldcl.karnataka.gov.in ಅಥವಾ ನಿಗಮದ ದೂ.ವಾ.ಸಂಖ್ಯೆ 080–22865522, 9900012351ನ್ನು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW