ತುಮಕೂರು: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ಅವರೊಂದಿಗೆ ಸುದೀರ್ಘ ಒಂದು ಗಂಟೆಗಳ ಕಾಲ ನಡೆದ ಮಾತುಕತೆಯ ನಂತರ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತ ಪ್ರಕ್ರಿಯೆ ಗೆ ಚಾಲನೆ ದೊರೆತಿದ್ದು ಎಂದು ಬಿಜೆಪಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇದಲ್ಲದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ಅವರೊಂದಿಗೆ ಸುದೀರ್ಘ ಮಾತುಕತೆಯ ನಂತರವಷ್ಟೇ ನಾನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಹೇಳಿದರು.
ನಾನು ಕೇವಲ ಬಂದ ಪುಟ್ಟ ಹೋದ ಪುಟ್ಟ ಎಂಬ ಗಾದೆಗೆ ಸೀಮಿತವಾಗುವುದಿಲ್ಲ ಬದಲಾಗಿ ದೂರ ದೃಷ್ಟಿಕೋನದ ಅಭಿವೃದ್ಧಿಯ ಚಿಂತನೆಗಳೊಂದಿಗೆ ಚುನಾವಣಾ ಕಣದಲ್ಲಿ ಇದ್ದೇನೆ. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಿಗೆ ಸೇರಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
ಮಾಜಿ ಸಚಿವ ಮಾಧುಸ್ವಾಮಿ ಅವರು ಈ ಲೋಕಸಭೆ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಒಗ್ಗಟ್ಟಿನಿಂದ ನಾವೆಲ್ಲರೂ ಅವರ ಗೆಲುವಿಗೆ ಕೆಲಸ ಮಾಡುತ್ತಿದ್ದೆವು. ಪ್ರಸ್ತುತ ಅವರಿಗೆ ಟಿಕೆಟ್ ದೊರೆಯುತ್ತಿರುವ ಬಗ್ಗೆ ಸ್ವಲ್ಪ ಬೇಸರವಿದೆ ಈ ಕುರಿತಂತೆ ನಾನು ಅವರೊಂದಿಗೆ ಮಾತನಾಡುವ ಬಗ್ಗೆ ಬರುತ್ತೇನೆ ಎಂದು ಹೇಳಿದ್ದೆ ಆದರೆ ಅದಕ್ಕೆ ಅವರು ಒಪ್ಪಿರಲಿಲ್ಲ ಇನ್ನೂ ಸ್ವಲ್ಪ ದಿನಗಳ ಕಾಲ ನಂತರ ಅವರನ್ನು ಭೇಟಿಯಾಗಿ ಚರ್ಚಿಸುವೆ ಎಂದು ಹೇಳಿದರು.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಮಾಜಿ ಸಚಿವ ಸೋಮಣ್ಣ ದರ್ಶನ ಪಡೆದರು. ನಂತರ ವಿಶೇಷ ಪೂಜೆಯನ್ನು ಸಲ್ಲಿಸಿದರು ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಇವರೊಂದಿಗೆ ಸ್ಥಳೀಯ ಶಾಸಕ ಶಾಸಕರಾದ ಜ್ಯೋತಿ ಗಣೇಶ್ ಸುರೇಶ್ ಗೌಡ ಹಾಗೂ ಜೆಡಿಎಸ್ ಮಾಜಿ ಶಾಸಕ ವೀರಭದ್ರಯ್ಯ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


