ಹಾಸನ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ನ್ಯಾಯಾಲಯವಷ್ಟೇ ಪ್ರಕರಣದ ಮರು ತನಿಖೆಗೆ ಆದೇಶಿಸಬಹುದು ಎಂದಿದ್ದಾರೆ.
ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳ ದರ್ಶನ ಪಡೆದ ಬಳಿಕ ಮಾತನಾಡಿದ ಸಚಿವರು, ಸಿಬಿಐ ತನಿಖೆಯ ಬಳಿಕವೂ ಇನ್ನೂ ಬಾಕಿ ಏನು ಉಳಿಯಲು ಸಾಧ್ಯ? ಈ ಹಂತದಲ್ಲಿ ರಾಜ್ಯ ಸರ್ಕಾರದ ನಿಲುವಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮರು ತನಿಖೆಗೆ ಆಗ್ರಹಿಸುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.
2012ರಲ್ಲಿ ಧರ್ಮಸ್ಥಳದ ಹೊರವಲಯದಲ್ಲಿ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ 17 ವರ್ಷದ ಯುವತಿ ಸೌಜನ್ಯಾಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಲಾಗಿತ್ತು. ಅಂದಿನ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.


